ಜಾರ್ಖಂಡ್ ಮುಖ್ಯಮಂತ್ರಿ ಹೆಲಿಕಾಪ್ಟರ್ ಅಪಘಾತಕ್ಕೆ ತುತ್ತು

Posted by:
Published: Wednesday, May 9, 2012, 13:14 [IST]

jharkhand-cm-arjun-munda-helicopter-crashes
ರಾಂಚಿ, ಮೇ 9: ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿ ಅರ್ಜುನ್ ಮುಂಡಾ ಮತ್ತು ಅವರ ಪತ್ನಿ ಮೀರಾ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಇಲ್ಲಿನ ವಿಮಾನ ನಿಲ್ದಾಣದಲ್ಲಿ landing ವೇಳೆ ಬುಧವಾರ 12 ಗಂಟೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಿಂದ ಇಡೀ ಹೆಲಿಕಾಪ್ಟರ್ ನಜ್ಜುಗುಜ್ಜಾಗಿದೆ.

ಅಪಘಾತಕ್ಕೀಡಾದ ಮುಖ್ಯಮಂತ್ರಿ ಅರ್ಜುನ್ ಮುಂಡಾ ದಂಪತಿ ಸುರಕ್ಷಿತರಾಗಿದ್ದಾರೆ. ಆದರೆ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ವಿಮಾನ ನಿಲ್ದಾಣದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 30 ಅಡಿ ಎತ್ರರದಿಂದ  ಹೆಲಿಕಾಪ್ಟರ್ ಸುರುಳಿಯಂತೆ ತಿರುಗಿ ಬಿದ್ದಿದೆ.

ಗಾಯಗೊಂಡ ಮುಖ್ಯಮಂತ್ರಿ ಅರ್ಜುನ್ ಮುಂಡಾ ಅವರನ್ನು ರಾಂಚಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿದೆ. ಹೆಲಿಕಾಪ್ಟರ್ ಅಪಘಾತಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ. landingಗೆ ಮುನ್ನ ತಾಂತ್ರಿಕ ಅಡಚಣೆ ಕಾಣಿಸಿಕೊಂಡಿರಬಹುದು ಎನ್ನಲಾಗಿದೆ.

Story first published: Wednesday, May 09, 2012, 13:14 [IST]
ತಾಜಾ ಸುದ್ದಿಗಳಿಗೆ Oneindia Kannada App ಡೌನ್‌ಲೋಡ್ ಮಾಡಿ Android IOS